HomeLatest NewsBREAKING : ಹಾಸನದಲ್ಲಿ ಹೃದಯಾಘಾತಕ್ಕೆ ವೃದ್ದೆ ಬಲಿ : ಕಳೆದ 42 ದಿನದಲ್ಲಿ 31...

BREAKING : ಹಾಸನದಲ್ಲಿ ಹೃದಯಾಘಾತಕ್ಕೆ ವೃದ್ದೆ ಬಲಿ : ಕಳೆದ 42 ದಿನದಲ್ಲಿ 31 ಮಂದಿ ಸಾವು |Heart attack

ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ವೃದ್ದೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31 ಕ್ಕೇರಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಅರೆಕೆರೆ ಗ್ರಾಮದ ದೇವಮ್ಮ (72) ಎಂಬ ವೃದ್ದೆ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ದೇವಮ್ಮ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲಗಿದ್ದಲ್ಲೇ ಗ್ರಾಮ ಪಂಚಾಯತ್ ಸದಸ್ಯ ಸಾವು

ಮಲಗಿದ್ದಲ್ಲೇ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟಿದ್ದಾರೆ.ಆಲೂರು ತಾಲೂಕಿನ ಕಲ್ಲಾರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ (41) ಎಂದು ಗುರುತಿಸಲಾಗಿದೆ.

ಸಂತೋಷ್ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಮಲಗಿದ್ದಲ್ಲೇ ಹೃದಯಾಘಾತವಾಗಿದೆ.ಬೆಳಗ್ಗೆ ಕುಟುಂಬದವರು ಸಂತೋಷ್ ಅವರನ್ನು ಎಬ್ಬಿಸಲು ಹೋದಾಗ ಅವರು ಏಳಲಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಇತ್ತೀಚೆಗಷ್ಟೇ ಸಂತೋಷ್ ಹೃದಯಾಘಾತಕ್ಕೆ ಚಿಕಿತ್ಸೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular