
ಮೃತನನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ. ದುರ್ಗಾ ಅವರು ಅರಣ್ಯ ಪ್ರದೇಶದ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಕಾಡಾನೆ ಎದುರಾಗಿದೆ. ಗಾಬರಿಗೊಂಡು ಕಾಡಾನೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ತಪ್ಪಿಸಿಕೊಳ್ಳಲು ಆಗದೇ ಕಾಡಾನೆಯು ದುರ್ಗಾ ಅವರನ್ನು ತುಳಿದು ಹಾಕಿದೆ. ಪರಿಣಾಮ ಗಂಭೀರ ಗಾಯಗೊಂಡ ದುರ್ಗಾ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಆಲ್ದೂರು ವಲಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

