ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆ ಜಾರಿ

ಬೆಂಗಳೂರು: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸದ್ಯ 57.91 ಲಕ್ಷ ಹಿರಿಯ ನಾಗರಿಕರಿದ್ದು, ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಒದಗಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮಾಸಾಶನ ಮೊತ್ತ ಹೆಚ್ಚಳ ಮಾಡಬೇಕೆಂಬ ಹಿರಿಯ ನಾಗರೀಕರ ಬೇಡಿಕೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದು, ಇದಕ್ಕೆ ಸ್ಪಂದಿಸಿದ ಸಿಎಂ ಅಧಿಕಾರಿಗಳೊಂದಿಗೆ ಚರ್ಚಿಸಿ ವೃದ್ಧಾಪ್ಯ ವೇತನ(ಹಿರಿಯ ನಾಗರಿಕೆ ಮಾಸಾಶನ) ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read