HomeKarnatakaಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ.

ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಮನೆ ಮನೆ ಪ್ರಚಾರ ಕೈಗೊಳ್ಳಬಹುದು. ಇನ್ನೆರಡು ದಿನಗಳಲ್ಲಿ ಸೋಲು ಗೆಲುವಿನ ಚಿತ್ರಣವೇ ಬದಲಾಗಲಿದೆ. ರಾಜ್ಯದಲ್ಲಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಪರವಾಗಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊದಲಾದ ನಾಯಕರು ಪ್ರಚಾರ ನಡೆಸಿದ್ದಾರೆ.

ಕಾಂಗ್ರೆಸ್ ಪರವಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಸೇರಿದಂತೆ ಪ್ರಮುಖ ನಾಯಕರು ಪ್ರಚಾರ ನಡೆಸಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಇನ್ನು ಬಿ.ಎಸ್.ಪಿ. ಅಭ್ಯರ್ಥಿಗಳ ಪರವಾಗಿ ಮಾಯಾವತಿ, ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಅಖಿಲೇಶ್ ಯಾದವ್ ಕೂಡ ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ.

ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ, ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ.

ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕ್ಷೇತ್ರದಲ್ಲಿ ಮತದಾನದ ಹಕ್ಕು ಇಲ್ಲದವರು, ಸ್ಟಾರ್ ಪ್ರಚಾರಕರು ಕ್ಷೇತ್ರದಿಂದ ಹೊರಗೆ ಹೋಗಬೇಕಿದೆ. ಮತದಾನ ಮುಕ್ತಾಯದ 48 ಗಂಟೆ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಮತದಾರರು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಹೊರಗಿನ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular