HomeKarnatakaಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಗೃಹ ಸಚಿವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷ ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ. ಇದುವರೆಗೆ 5 ಸಲ ಚುನಾವಣೆಯಲ್ಲಿ ಸೋತು, 4 ಬಾರಿ ಗೆದ್ದಿದ್ದೇನೆ. ಗೆದ್ದಾಗ ಹಿಗ್ಗಿಲ್ಲ, ಸೋತಾಗ ಕುಗ್ಗಿಲ್ಲ. ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡಿಕೊಂಡು ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular