HomeKarnatakaಮತದಾನ ಜಾಗೃತಿಗೆ ನಿರ್ದೇಶಕ ರಾಜಮೌಳಿ ನೇಮಕ: ಜೆಡಿಎಸ್ ಆಕ್ಷೇಪ

ಮತದಾನ ಜಾಗೃತಿಗೆ ನಿರ್ದೇಶಕ ರಾಜಮೌಳಿ ನೇಮಕ: ಜೆಡಿಎಸ್ ಆಕ್ಷೇಪ

ರಾಯಚೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿಗೆ ರಾಯಚೂರು ಜಿಲ್ಲಾ ರಾಯಭಾರಿಯಾಗಿ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಚುನಾವಣಾ ಆಯೋಗದ ನಡೆಗೆ ರಾಯಚೂರು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಎನ್. ಶಿವಶಂಕರ್ ಆಕ್ಷೇಪಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶಿವಶಂಕರ್, ರಾಜಮೌಳಿ ಅವರ ತಂದೆ ಬಿಜೆಪಿಯಿಂದ ರಾಜ್ಯಸಭೆ ಸದಸ್ಯ ಸದಸ್ಯರಾಗಿದ್ದಾರೆ. ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ‘ಆರ್.ಎಸ್.ಎಸ್.’ ಎಂದು ಹೆಸರಿಟ್ಟಿದ್ದಾರೆ. ಈ ವಿಚಾರಗಳು ರಾಜಮೌಳಿ ಬಿಜೆಪಿ ಪರವಾಗಿರುವುದನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು ಜಿಲ್ಲೆಯಲ್ಲಿ ಆಂಧ್ರಪ್ರದೇಶದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ರಾಜಮೌಳಿ ಅವರನ್ನು ಮತದಾನ ಜಾಗೃತಿ ರಾಯಭಾರಿಯಾಗಿ ನೇಮಿಸಿರುವುದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ರಾಜ್ಯ ಚುನಾವಣಾ ಆಯೋಗ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular