HomeKarnatakaಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಅಕ್ರಮ ಹಣ ಬಳಸಿದ್ದ ಶಾಸಕ ನಾಗೇಂದ್ರ

ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಅಕ್ರಮ ಹಣ ಬಳಸಿದ್ದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಹಣದಲ್ಲಿ 20 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೋಕಸಭೆ ಚುನಾವಣೆಗೆ ಮಾಜಿ ಸಚಿವ ಬಿ. ನಾಗೇಂದ್ರ ಬಳಸಿಕೊಂಡಿದ್ದಾರೆ. ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಹಣ ಖರ್ಚು ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ನಾಗೇಂದ್ರ ಅವರೇ ಸೂತ್ರದಾರ ಎಂಬುದನ್ನು ಇಡಿ ಪತ್ತೆ ಮಾಡಿದ್ದು, ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ ಎನ್ನಲಾಗಿದೆ.

ನಾಗೇಂದ್ರ ಅವರನ್ನು ಬಂಧಿಸಿದ ನಂತರ ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನಿಂದ ಹೈದರಾಬಾದ್ ಬ್ಯಾಂಕ್ ಖಾತೆಗೆ ಅಲ್ಲಿಂದ ಸೊಸೈಟಿಗೆ ವರ್ಗಾವಣೆ ಆಗಿರುವ ಹಣ ಎಲ್ಲೆಲ್ಲಿಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಸೊಸೈಟಿ ಖಾತೆಯಿಂದ ವಿವಿಧ ಕಂಪನಿಗಳು, ಆಭರಣ, ಮದ್ಯದ ಅಂಗಡಿಗಳಿಗೆ ಹೋಗಿ ಅಲ್ಲಿಂದ ಕೈ ಬದಲಾವಣೆಯಾಗಿದೆ. ಈ ಹಣ ಚುನಾವಣೆ ವೆಚ್ಚಕ್ಕೆ ಬಳಕೆಯಾಗಿದೆ ಎಂದು ಇಡಿ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular