HomeKarnatakaBIG NEWS: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ವಿನೂತನ ಹೆಜ್ಜೆ: ಇಂದು 224 ಕ್ಷೇತ್ರಗಳಲ್ಲಿ ಮತದಾನ

BIG NEWS: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ವಿನೂತನ ಹೆಜ್ಜೆ: ಇಂದು 224 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ವಿನೂತನ ಪದ್ಧತಿ ಅನುಸರಿಸಲಾಗುತ್ತಿದೆ.

ಇಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 22 ಸಾವಿರ ಸ್ಥಳಿಯ ಮುಖಂಡರು ಮತದಾನ ಮಾಡಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ 4 ಹಂತಗಳ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಥಳೀಯ ಪದಾಧಿಕಾರಿಗಳು, ಮುಖಂಡರು ಮೂವರು ಅಭ್ಯರ್ಥಿಗಳಿಗೆ ಮತದಾನ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಎರಡು ದಿನ ಬೆಂಗಳೂರಿನಲ್ಲಿ ಜಿಲ್ಲಾ ಕೋರ್ ಕಮಿಟಿ ಸದಸ್ಯರಿಂದ ರಾಜ್ಯ ನಾಯಕರಿಗೆ ಅಭಿಪ್ರಾಯ ಸಲ್ಲಿಸಲಾಗುತ್ತದೆ. ಬಳಿಕ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ನಂತರ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಇಂದು ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಮುಖಂಡರು ಮತದಾನ ಮಾಡಲಿದ್ದಾರೆ. ಶಕ್ತಿ ಕೇಂದ್ರಗಳ ಪ್ರಮುಖರು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಜಿಲ್ಲಾ ಘಟಕಗಳಿಗೆ ನೇಮಕವಾದವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತ ಹಾಕಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular