ಶಿವಮೊಗ್ಗ ಬಿಜೆಪಿ ಟಿಕೆಟ್ ಗೆ ಬಿಗ್ ಫೈಟ್: ಭಾರೀ ಕುತೂಹಲ ಮೂಡಿಸಿದ ಆಯನೂರು ಸುದ್ದಿಗೋಷ್ಠಿ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗೆ ಭಾರಿ ಪೈಪೋಟಿ ಇದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಆಯನೂರು  ಮಂಜುನಾಥ್ ನಡುವೆ ಬಿಜೆಪಿ ಟಿಕೆಟ್ ಗಾಗಿ ಸ್ಪರ್ಧೆ ಇದೆ. ಇವರೊಂದಿಗೆ ಇನ್ನೂ ಹಲವು ಆಕಾಂಕ್ಷಿಗಳಿದ್ದಾರೆ.

ಪ್ರಮುಖವಾಗಿ ಈಶ್ವರಪ್ಪ ಸ್ಪರ್ಧಿಸುವುದು ಖಚಿತವಾಗಿದ್ದು, ಆಯನೂರು ಮಂಜುನಾಥ್ ಕೂಡ ತಮಗೊಂದು ಅವಕಾಶ ಕೊಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದಾರೆ. ಆಯನೂರು ಮಂಜುನಾಥ್ ಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಇನ್ನು ಕಾಂಗ್ರೆಸ್ ನಲ್ಲಿ ಹೊರಗಿನಿಂದ ಬಂದವರಿಗೆ ಟಿಕೆಟ್ ಕೊಡದೇ ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದ ಮತ್ತು ಈಗಿರುವ ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಖಾಸಗಿ ಹೋಟೆಲ್ ನಲ್ಲಿ ಆಯನೂರು ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆಯ ವಿಚಾರವಾಗಿ ಪ್ರಮುಖ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಅವರ ಪತ್ರಿಕಾಗೋಷ್ಠಿ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read