HomeKarnatakaBREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

BREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಮೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶ ಇರುತ್ತದೆ. ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕಿದೆ. ನೀತಿ ಸಮಿತಿ ಉಲ್ಲಂಘಿಸಿದವರ ವಿರುದ್ಧ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್, ಎನ್.ಡಿ.ಎ. ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಶಿಗ್ಗಾವಿಯಲ್ಲಿ ಎನ್.ಡಿ.ಎ.ಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ್ ಕಣದಲ್ಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ, ಎನ್.ಡಿ.ಎ. ಅಭ್ಯರ್ಥಿಯಾಗಿ ಬಂಗಾರು ಲಕ್ಷ್ಮಣ್ ಸ್ಪರ್ಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣದಲ್ಲಿ ಆರೋಪ, ಪ್ರತ್ಯಾರೋಪಗಳ ಸುರಿಮಳೆಯಾಗಿದೆ. ಕೊನೆ ಕ್ಷಣದಲ್ಲಿ ಮತದಾರರ ಸೆಳೆಯಲು ಕಸರತ್ತು ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular