ಅಕ್ಕಿ, ಬೇಳೆ, ನಗದು, ರಗ್ಗು, ಜಮಖಾನ ಸೇರಿ ಅನಧಿಕೃತವಾಗಿ ಸಂಗ್ರಹಿಸಿದ್ದ ವಸ್ತುಗಳು ವಶಕ್ಕೆ

ಶಿವಮೊಗ್ಗ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 10,00,000 ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 5,00,000 ರೂ.ಗಳ 115 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ 3 ಲಗೇಜ್ ವಾಹನಗಳಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 4,50,000 ರೂ. ಬೆಲೆಯ ರಗ್ಗು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 90,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read