HomeKarnatakaಈ ಉಪಚುನಾವಣೆ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು: ಸಿಎಂ ಸಿದ್ಧರಾಮಯ್ಯ

ಈ ಉಪಚುನಾವಣೆ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತದ ಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಠಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ.

ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ಎಲ್ಲಕ್ಕಿಂತ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು ಎಂದು ಸಿಎಂ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎರಡೂ ಪಕ್ಷಗಳು ಕೂಡಿಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದರು. ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು  ಕಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular