ನವದೆಹಲಿ: ಮತದಾರರಿಗೆ ಮೂರು ತಿಂಗಳಲ್ಲಿ ವಿಶಿಷ್ಟ ಸಂಖ್ಯೆ ನೀಡಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಹಲವು ಮತದಾರರ ಗುರುತಿನ ಚೀಟಿಗಳು ಒಂದೇ ಎಪಿಕ್ ಸಂಖ್ಯೆ ಹೊಂದಿರುವ ಸಮಸ್ಯೆಯನ್ನು ಮೂರು ತಿಂಗಳಲ್ಲಿ ಪರಿಹರಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಒಂದೇ ಎಪಿಕ್ ಸಂಖ್ಯೆ ಹೊಂದಿರುವ ವಿಚಾರ ಈಗಾಗಲೇ ಆಯೋಗದ ಗಮನಕ್ಕೆ ಬಂದಿದ್ದು, ತಾಂತ್ರಿಕ ತಂಡ ಮತ್ತು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುಧೀರ್ಘ ಕಾಲದಿಂದ ಬಾಕಿ ಉಳಿದ ಈ ಸಮಸ್ಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಸರಿಪಡಿಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಒಂದೇ ಎಪಿಕ್ ಸಂಖ್ಯೆ ನೀಡಿರುವ ಮತದಾರರ ಗುರುತಿನ ಚೀಟಿಗಳಿಗೆ ವಿಶಿಷ್ಟ ಸಂಖ್ಯೆಗಳನ್ನು ನೀಡಲಾಗುವುದು. ಮತದಾರರ ಗುರುತಿನ ಚೀಟಿಯ ಸಂಖ್ಯೆಗಳು ಏನೇ ಇರಬಹುದು. ಆದರೆ, ಮತದಾರರು ತಮಗೆ ನಿಗದಿ ಮಾಡಲಾದ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.