BIG NEWS: ಪಂಚ ರಾಜ್ಯಗಳ ಚುನಾವಣೆಯಲ್ಲಿ 1760 ಕೋಟಿ ರೂ. ನಗದು, ಮದ್ಯ ವಶಕ್ಕೆ

ನವದೆಹಲಿ: ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾದಾಗಿನಿಂದ 1760 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದು 2018 ರಲ್ಲಿ ಮಿಜೋರಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ ವಶಪಡಿಸಿಕೊಂಡಿದ್ದಕ್ಕಿಂತ 7 ಪಟ್ಟು ಹೆಚ್ಚು. ಇದುವರೆಗೆ ತೆಲಂಗಾಣದಲ್ಲಿ ಸುಮಾರು 659 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದಲ್ಲಿ 323 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.

ಈ ಬಾರಿ ಆಯೋಗವು ಚುನಾವಣಾ ಸೀಜರ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಮೂಲಕ ಮೇಲ್ವಿಚಾರಣಾ ಪ್ರಕ್ರಿಯೆಯಲ್ಲಿ ತಂತ್ರಜ್ಞಾನ ಅಳವಡಿಸಿದೆ. ಇದು ಅಕ್ರಮ ತಡೆಗಟ್ಟುವಿಕೆಗಾಗಿ ಇತರ ಸಂಬಂಧಿತ ಏಜೆನ್ಸಿಗಳಿಗೆ ಮಾಹಿತಿಯನ್ನು ತ್ವರಿತವಾಗಿ ಹಂಚಿಕೊಳ್ಳುವ ಗುರಿ ಹೊಂದಿದೆ.

ಚುನಾವಣಾ ದುಷ್ಕೃತ್ಯಗಳನ್ನು ಮಟ್ಟಹಾಕಲು ದೃಢವಾದ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಮುಕ್ತ, ನ್ಯಾಯಯುತ ಮತ್ತು ಪ್ರಚೋದನೆ-ಮುಕ್ತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಆಯೋಗದ ಅಚಲ ಬದ್ಧತೆಯನ್ನು ಪ್ರದರ್ಶಿಸುತ್ತವೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read