HomeIndiaBIG NEWS: ಮತಗಟ್ಟೆಗಳ ಸಮಸ್ಯೆ ಬಗೆಹರಿಸಲು ಚುನಾವಣಾ ಆಯೋಗ ಮಹತ್ವದ ಕ್ರಮ: ಅಧಿಕಾರಿಗಳ ನಿಯೋಜನೆ

BIG NEWS: ಮತಗಟ್ಟೆಗಳ ಸಮಸ್ಯೆ ಬಗೆಹರಿಸಲು ಚುನಾವಣಾ ಆಯೋಗ ಮಹತ್ವದ ಕ್ರಮ: ಅಧಿಕಾರಿಗಳ ನಿಯೋಜನೆ

ನವದೆಹಲಿ: ವಿಧಾನಸಭೆ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ.

ದೇಶಾದ್ಯಂತ 4123 ಚುನಾವಣಾ ನೋಂದಣಿ ಅಧಿಕಾರಿಗಳು, 788 ಜಿಲ್ಲಾ ಚುನಾವಣಾ ಅಧಿಕಾರಿಗಳು, 36 ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸರ್ವ ಪಕ್ಷ ಸಭೆ ನಡೆಸಲು ಸೂಚಿಸಲಾಗಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಅವರ ಸಲಹೆ ಮೇರೆಗೆ ಬೂತ್ ಮಟ್ಟದಲ್ಲಿ ಆದ್ಯತೆ ಮೇಲೆ ಸಮಸ್ಯೆಗಳನ್ನು ಪರಿಹರಿಸಬೇಕು. ಮಾರ್ಚ್ 31ರವರೆಗೆ ಈ ಸಭೆಗಳನ್ನು ನಡೆಸಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ಅನೇಕ ರಾಜ್ಯಗಳಲ್ಲಿ ಚುನಾವಣೆಗೆ ಮೊದಲು ಬೂತ್ ಮಟ್ಟದ ಸಮಸ್ಯೆಗಳ ದೂರುಗಳು ಬಾಕಿ ಇರುವುದರಿಂದ ಮಾರ್ಚ್ 4ರಂದು ದೆಹಲಿಯಲ್ಲಿ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರ ಆಡಳಿತ ಪ್ರದೇಶಗಳ ಸಿಇಒಗಳ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಆಯೋಗ ಈ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ಮತಗಟ್ಟೆ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಸರ್ವ ಪಕ್ಷ ಸಭೆಗಳನ್ನು ನಡೆಸಲು ಆರಂಭಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular