ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ.
ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು.
370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮ ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ 2024 ರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಇಂದೇ ಉಪಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ.
Election Commission of India to announce the schedule for General Election to Legislative Assemblies, today. pic.twitter.com/EckI51NcMI
— ANI (@ANI) August 16, 2024