HomeKarnatakaBIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, ವಿಧಾನಸಭಾ ಕ್ಷೇತ್ರಗಳಿಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಜೊತೆಗೆ ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಮಧ್ಯೆ ಹಣಾಹಣಿಗೆ ವೇದಿಕೆ ಸಜ್ಜಾಗಲಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹಾವೇರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಬಸವರಾಜ ಬೊಮ್ಮಾಯಿ, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಈ. ತುಕಾರಾಂ ಅವರ ರಾಜೀನಾಮೆಯಿಂದಾಗಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳು ತೆರವಾಗಿದ್ದು, ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular