HomeKarnatakaBIG NEWS: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ; ಏ. 5 ರೊಳಗೆ ದಿನಾಂಕ ಪ್ರಕಟ...

BIG NEWS: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ; ಏ. 5 ರೊಳಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಏಪ್ರಿಲ್ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಶುರುವಾಗಿದ್ದು, ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಚುನಾವಣಾ ಆಯೋಗ ಕೂಡ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತಗಳಿಗೆ ತಿಳಿಸಿದೆ. ಬಹುತೇಕ ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular