ಚುನಾವಣೆ ಕರ್ತವ್ಯದಿಂದ ಗರ್ಭಿಣಿಯರು, 55 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡಲು ಮನವಿ

ಬೆಂಗಳೂರು: ಚುನಾವಣೆ ಕರ್ತವ್ಯದಿಂದ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿಯರು, ವಿಕಲಚೇತನ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಸಂಘದ ಪದಾಧಿಕಾರಿಗಳು ಪತ್ರ ಬರೆದಿದ್ದಾರೆ. 55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರಿಗೆ ಚುನಾವಣೆ ಕರ್ತವ್ಯದಿಂದ ವಿನಾಯಿತಿ ನೀಡಬೇಕೆಂದು ಕೋರಲಾಗಿದೆ.

ಶಿಕ್ಷಕಿಯರನ್ನು ಕರ್ತವ್ಯಕ್ಕೆ ನಿರ್ವಹಿಸುತ್ತಿರುವ ಮತಕ್ಷೇತ್ರಗಳಲ್ಲಿ ಅಥವಾ ತಾಲೂಕುಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿರ್ಯೋಜಿಸಬೇಕು. ತೀವ್ರತರವಾದ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕರು, ಗರ್ಭಿಣಿಯರು, ಚಿಕ್ಕ ಮಕ್ಕಳು ಇರುವ ಶಿಕ್ಷಕಿಯರು, ವಿಕಲಚೇತನ ಮಕ್ಕಳನ್ನು ಹೊಂದಿರುವ ಶಿಕ್ಷಕಿಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು.

ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು ಚುನಾವಣಾ ಕಾರ್ಯ ಮುಗಿದ ನಂತರ ರಾತ್ರಿ ವೇಳೆ ಅವರ ಸ್ಥಳಕ್ಕೆ ತೆರಳಲು ವಾಹನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಈ ಕುರಿತು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read