HomeKarnatakaಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್ ಗಳ ಪೈಕಿ ಖುಲಾಸೆ ಮತ್ತು ರದ್ದಾದ ಪ್ರಕರಣಗಳ ಮಾಹಿತಿಯನ್ನು ಸಹ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

ಕ್ರಿಮಿನಲ್ ಪ್ರಕರಣದಲ್ಲಿ ಖುಲಾಸೆಗೊಂಡ ಮಾಹಿತಿ ಮುಚ್ಚಿಟ್ಟಿದ್ದ ಹಿನ್ನೆಲೆಯಲ್ಲಿ ತಮ್ಮ ಸದಸ್ಯತ್ವ ಅನರ್ಹಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಾಗಲಕೋಟೆ ಜಿಲ್ಲೆ ಬೇವೂರು ಗ್ರಾಮ ಪಂಚಾಯಿತಿ ಸದಸ್ಯ ಮುದಿಯಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ನಾಮಪತ್ರದೊಂದಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿ ತನ್ನ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿವರ ನೀಡಿದರೆ ಸಾಲದು. ಅದರೊಂದಿಗೆ ತಮ್ಮ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳು, ವಿಚಾರಣೆಗೆ ಬಾಕಿ ಇರುವ, ರದ್ದಾದ, ಬಿಡುಗಡೆ ಅಥವಾ ಖುಲಾಸೆಯಾದ ಪ್ರಕರಣಗಳ ಮಾಹಿತಿಯನ್ನು ಕೂಡ ಕಡ್ಡಾಯವಾಗಿ ನೀಡಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular