ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ.

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಉಪಚುನಾವಣೆ ಅಖಾಡ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರೂ ಡಿ.ಕೆ. ಸುರೇಶ್ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ರಘುನಂದನ್ ರಾಮಣ್ಣ ಅವರ ಹೆಸರೂ ಪರಿಶೀಲನೆಯಲ್ಲಿದೆ ಎನ್ನಲಾಗಿದೆ. ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಯಮತ್ತು ಸೇರಿ ಹಲವರ ಹೆಸರು ಪರಿಗಣನೆಯಲ್ಲಿದೆ ಎನ್ನಲಾಗಿದೆ. ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದು, ಎನ್.ಡಿ.ಎ. ಅಭ್ಯರ್ಥಿಯಾಗಲು ಪ್ರಯತ್ನಿಸಿದ್ದಾರೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಅವರು ಬಂಡಾಯವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಯಾಸಿರ್ ಅಹಮದ್ ಖಾನ್, ಸೈಯದ್ ಅಜ್ಜಂಪೀರ್ ಖಾದ್ರಿ, ಸಂಜೀವ ನೀರಲಗಿ, ಬಿಜೆಪಿಯಿಂದ ಶಶಿಧರ ಎಲಿಗಾರ, ಶ್ರೀಕಾಂತ ದುಂಡಿಗೌಡರ, ಭರತ್ ಬೊಮ್ಮಾಯಿ ಇಲ್ಲವೇ ನಿರಾಣಿ ಅಭ್ಯರ್ಥಿಯಾಗಬಹುದೆಂದು ಹೇಳಲಾಗಿದೆ.

ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ, ಸೌಪರ್ಣಿಕಾ, ಬಿಜೆಪಿಯಿಂದ ದೇವೇಂದ್ರಪ್ಪ, ಬಂಗಾರು ಹನುಮಂತು, ಬಿ. ಶ್ರೀರಾಮುಲು ಸೇರಿ ಹಲವರ ಹೆಸರುಗಳು ಪರಿಶೀಲನೆಯಲ್ಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read