HomeKarnatakaರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸಿನಿಂದ ಸಾಗಿದೆ.

ಗುರುವಾರ ಸಂಸದರಾದ ಬಿ.ವೈ. ರಾಘವೇಂದ್ರ, ಉಮೇಶ್ ಜಾಧವ್ ಸೇರಿ 93 ಅಭ್ಯರ್ಥಿಗಳು 104 ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೂ ಒಟ್ಟು 241 ಅಭ್ಯರ್ಥಿಗಳು 251 ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ.

ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular