HomeKarnatakaನಾಳೆಯಿಂದ ರಂಗೇರಲಿದೆ ವಿಧಾನಸಭೆ ಚುನಾವಣೆ: ನಾಳೆಯೇ ನಾಮಪತ್ರ ಸಲ್ಲಿಕೆ ಆರಂಭ, ಅಧಿಸೂಚನೆ ಪ್ರಕಟ

ನಾಳೆಯಿಂದ ರಂಗೇರಲಿದೆ ವಿಧಾನಸಭೆ ಚುನಾವಣೆ: ನಾಳೆಯೇ ನಾಮಪತ್ರ ಸಲ್ಲಿಕೆ ಆರಂಭ, ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ನಾಳೆ ಅಧಿಸೂಚನೆ ಪ್ರಕಟಿಸುವುದರೊಂದಿಗೆ ವಿಧಾನಸಭೆ ಚುನಾವಣೆ ರಂಗೇರಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಚಾರದ ಅಬ್ಬರ ಹೆಚ್ಚಾಗಲಿದೆ. ಚುನಾವಣಾ ಆಯೋಗದಿಂದ ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 2.63 ಕೋಟಿ ಪುರುಷರು, 2.60 ಮಹಿಳಾ ಮತದಾರರು ಸೇರಿ 5.24 ಕೋಟಿ ಮತದಾರರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular