HomeKarnatakaBIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ...

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 10 ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಆಯೋಗ ಇಂದು ಅಧಿಸೂಚನೆ ಹೊರಡಿಸಲಿದೆ. ಪ್ರತಿ ವಿಧಾನಸಭೆ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular