ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ನಾಳೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು.ಮುಂದಿನ 5 ವರ್ಷಗಳ ಕಾಲ ತೆಲಂಗಾಣವು ಜನಪರ, ಅಭಿವೃದ್ಧಿಶೀಲ, ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗಲಿದೆ ಎಂಬ ಪೂರ್ಣ ಭರವಸೆಯಿದೆ.
ರೇವಂತ್ ರೆಡ್ಡಿಯವರ ಆಯ್ಕೆಯಿಂದ ಕರ್ನಾಟಕ – ತೆಲಂಗಾಣ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read