HomeKarnatakaBREAKING NEWS: ಚುನಾವಣಾಧಿಕಾರಿಗಳನ್ನು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ಕದ್ದು ಪರಾರಿಯಾದ ಖದೀಮರು

BREAKING NEWS: ಚುನಾವಣಾಧಿಕಾರಿಗಳನ್ನು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ಕದ್ದು ಪರಾರಿಯಾದ ಖದೀಮರು

ರಾಮನಗರ: ಚುನಾವಣಾಧಿಕಾರಿಗಳನ್ನು ಮಾರ್ಗ ಮಧ್ಯೆಯೇ ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ರಾಮನಗರ ತಾಲೂಕಿನ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನವಣೆ ನಡೆಯುತ್ತಿದ್ದು, ಚುನಾವಣಾಧಿಕಾರಿಗಳಾಗಿ ತೆರಳುತ್ತಿದ್ದ ಅಧಿಕಾರಿಗಳ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ. ಉಮೇಶ್ ಹಾಗೂ ಉಷಾ ಎಂಬ ಅಧಿಕಾರಿಗಳನ್ನು ರಸ್ತೆ ಮಧ್ಯೆಯೇ ತಡೆದು, ಖದೀಮರು ಹಲ್ಲೆಗೆ ಯತ್ನಿಸಿದ್ದಾರೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಲ್ಯಾಪ್ ಟಾಪ್, ಬ್ಯಾಲೇಟ್ ಪೇಪರ್ ಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular