ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ.

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 28, 29ರಂದು ಒಟ್ಟು 5 ಕಡೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಏ. 28 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ, ಮಧ್ಯಾಹ್ನ 12 ಗಂಟೆಗೆ ಶಿರಸಿ, 2 ಗಂಟೆಗೆ ದಾವಣಗೆರೆ, ಸಂಜೆ 4 ಗಂಟೆಗೆ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶ ಮಾತನಾಡಲಿದ್ದಾರೆ. ಏಪ್ರಿಲ್ 29ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದು, ಪ್ರಚಾರ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಮತ ಯಾಚಿಸಲಿದ್ದಾರೆ.

ಪ್ರಧಾನಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read