7 ಹಾಲಿ ಶಾಸಕರಿಗೆ ಬಿಗ್ ಶಾಕ್: ಸರ್ವೆ ವರದಿಯಿಂದ ಕೈತಪ್ಪಿದ ಟಿಕೆಟ್…?

ನವದೆಹಲಿ: ಕಾಂಗ್ರೆಸ್ ಪಕ್ಷದ 7 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆಡಳಿತ ವಿರೋಧಿ ಅಲೆ ಹಿನ್ನಲೆ ಕುಟುಂಬದ ಇತರರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಸರ್ವೆ ವರದಿ ನೆಗೆಟಿವ್ ಹಿನ್ನೆಲೆಯಲ್ಲಿ 7 ಶಾಸಕರಿಗೆ ಟಿಕೆಟ್ ಮಿಸ್ ಆಗಲಿದೆ. ದಾವಣಗೆರೆ ಜಿಲ್ಲೆ ಹರಿಹರದ ಹಾಲಿ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ನೀಡಲು ತಡೆ ನೀಡಲಾಗಿದೆ. ಹರಿಹರ ವಿಧಾನಸಭೆ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಟಿಕೆಟ್ ನೀಡದಂತೆ ಕುರುಬ ಸಮುದಾಯ, ಪಂಚಮಸಾಲಿ ಮಠ ಪತ್ರ ಬರೆದ ಹಿನ್ನೆಲೆಯಲ್ಲಿ ರಾಮಪ್ಪ ಅವರಿಗೆ ಟಿಕೆಟ್ ನೀಡದಿರಲು ಚಿಂತನೆ ನಡೆದಿದೆ.

ಸರ್ವೆ ವರದಿ ಮತ್ತು ಆಡಳಿತ ವಿರೋಧಿ ಅಲೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ಹಾಲಿ ಶಾಸಕ ಡಿಎಸ್ ಹುಲಗೇರಿ ಅವರಿಗೆ ಟಿಕೆಟ್ ನೀಡಲು ತಡೆ ಹಾಕಲಾಗಿದೆ.

ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಕಲಬುರ್ಗಿ ಉತ್ತರ ಶಾಸಕಿ ಕನಿಜಾ ಫಾತೀಮಾ, ಅಫಜಲ್ಪುರ ಶಾಸಕ ಎಂ.ವೈ. ಪಾಟೀಲ್, ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ. ಪಾವಗಡ ಶಾಸಕ ವೆಂಕಟರಮಣಪ್ಪ ಅವರಿಗೆ ಟಿಕೆಟ್ ನೀಡಲು ತಡೆ ನೀಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read