HomeKarnatakaರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ 11, ಜೆಡಿಎಸ್ 3, ಬಿಎಸ್ಪಿ 12 ಸೇರಿದಂತೆ 247 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.

2.88 ಕೋಟಿ ಜನರು ಮತದಾನ ಮಾಡಲಿದ್ದಾರೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಜ್ಜಾಗಿದೆ. ರಾಜ್ಯದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಉಡುಪಿ- ಚಿಕ್ಕಮಗಳೂರು, ಮೈಸೂರು -ಕೊಡಗು ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular