ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತ್ಯಧಿಕ ಶೇ. 88ರಷ್ಟು ಮತದಾನ: ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇಕಡ 81.84ರಷ್ಟು ಮತದಾನವಾಗಿದೆ.

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ 31 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಸಂಡೂರಿನಲ್ಲಿ 6, ಶಿಗ್ಗಾವಿಯಲ್ಲಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಅತ್ಯಧಿಕ ಶೇಕಡ 88.80ರಷ್ಟು ಮತದಾನವಾಗಿದೆ. 1,00,501 ಪುರುಷರು, 1,06,362 ಮಹಿಳೆಯರು, ಮೂವರು ಇತರರು ಸೇರಿದಂತೆ 2,06,866 ಮತದಾರರು ಮತ ಚಲಾಯಿಸಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಶೇಕಡ 76.24 ರಷ್ಟು ಮತದಾನವಾಗಿದ್ದು, 90,922 ಪುರುಷರು, 89,252 ಮಹಿಳೆಯರು, ಇಬ್ಬರು ಇತರರು ಸೇರಿ 1,80,189 ಮತದಾರರು ಮತ ಚಲಾಯಿಸಿದ್ದಾರೆ.

ಶಿಗ್ಗಾವಿಯಲ್ಲಿ ಶೇಕಡ 80.48ರಷ್ಟು ಮತದಾನವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read