HomeIndiaLOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಇಂದು ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ ವಿಧಾನಸಭೆಯ 175 ಸ್ಥಾನಗಳಿಗೂ ಸಹ ಮತದಾನ ನಡೆಯುತ್ತಿದ್ದು, ಇನ್ನು 147 ಸದಸ್ಯ ಬಲ ಹೊಂದಿರುವ ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಇಂದು ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರ, ತೆಲಂಗಾಣದ 17 ಕ್ಷೇತ್ರ, ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ತಲಾ 8, ಬಿಹಾರದ 5 ಕ್ಷೇತ್ರ, ಜಮ್ಮು ಮತ್ತು ಕಾಶ್ಮೀರದ 1, ಒಡಿಶಾ ಮತ್ತು ಜಾರ್ಖಂಡ್ ನ ತಲಾ 4 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular