HomeKarnatakaಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ ಮಾಡಿರುವ ಕಲಘಟಗಿ ತಹಶೀಲ್ದಾರ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ.ಇ.ಡಿ. ಅವರನ್ನು ತಕ್ಷಣಕ್ಕೆ ಜಾರಿ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸಿ ಕರ್ತವ್ಯಲೋಪ ಮಾಡುವುದಲ್ಲದೆ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟುಮಾಡಿ, ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಉಲ್ಲಂಘನೆ ಮಾಡಿದ್ದರಿಂದ ಸುನೀಲ ಇ.ಡಿ. ಅವರನ್ನು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1957ರ ನಿಯಮ ಪ್ರಕಾರ ಸದರಿ ಅವರ ಮೇಲಿನ ಇಲಾಖೆ ವಿಚಾರಣಾ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಮಾನತ್ತು ಆಗಿರುವ ಗ್ರಾಮ ಆಡಳಿತ ಅಧಿಕಾರಿ ಸುನೀಲ ಇ.ಡಿ. ಅವರ ಲೀನ್ ಅನ್ನು ತಹಶೀಲ್ದಾರ ಕಲಘಟಗಿ ಕಾರ್ಯಾಲಯದಿಂದ ತಹಶೀಲ್ದಾರ ನವಲಗುಂದ ಇವರ ಕಾರ್ಯ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಸಾಜಾಕ್ಕೆ ವರ್ಗಾಯಿಸಿದೆ.

ಅಮಾನತ್ತು ಅವಧಿಯಲ್ಲಿ ಆಪಾದಿತ ನೌಕರನು ತಹಶೀಲ್ದಾರ ನವಲಗುಂದ ಇವರ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದಲ್ಲ ಮತ್ತು ನೌಕರನು ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹನಿರುತ್ತಾನೆ ಎಂದು ಜಿಲ್ಲಾಧಿಕಾರಿಗಳು ಆದೇಶಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular