HomeKarnatakaಚನ್ನಪಟ್ಟಣದಿಂದ ಯೋಗೇಶ್ವರ್ ಸ್ಪರ್ಧೆ ಖಚಿತ: ಯಾವ ಪಕ್ಷದಿಂದ ಅನ್ನೋದೇ ಸಸ್ಪೆನ್ಸ್

ಚನ್ನಪಟ್ಟಣದಿಂದ ಯೋಗೇಶ್ವರ್ ಸ್ಪರ್ಧೆ ಖಚಿತ: ಯಾವ ಪಕ್ಷದಿಂದ ಅನ್ನೋದೇ ಸಸ್ಪೆನ್ಸ್

ರಾಮನಗರ: ಚನ್ನಪಟ್ಟಣದ ಉಪ ಚುನಾವಣೆಗೆ ಎನ್.ಡಿ.ಎ. ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಬಳಿ ನಾವು ಚರ್ಚೆ ನಡೆಸುತ್ತೇವೆ. ನೀವೇ ಅಭ್ಯರ್ಥಿಯಾಗಬೇಕು ಎಂದು ತಾಕೀತು ಮಾಡಿದ್ದಾರೆ. ನಾನು ನಮ್ಮ ನಾಯಕರ ಬಳಿಯೂ ಚರ್ಚಿಸುತ್ತೇನೆ. ಮುಂದಿನ ತೀರ್ಮಾನ ರಾಜ್ಯದ ನಾಯಕರು ಕೈಗೊಳ್ಳುತ್ತಾರೆ. ಜೆಡಿಎಸ್ ಕಾರ್ಯಕರ್ತರೇ ಸಭೆ ನಡೆಸಿದ್ದಾರೆ. ಅಂದ ಮೇಲೆ ಈ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಠರೇ ತೀರ್ಮಾನ ಮಾಡಲಿ ಎಂದು ಹೇಳಿದ್ದಾರೆ.

ಬಿಜೆಪಿಯವರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಎನ್ನುತ್ತಿದ್ದಾರೆ. ಜೆಡಿಎಸ್ ಸ್ಥಳೀಯ ಮುಖಂಡರು ಜೆಡಿಎಸ್ ನಿಂದ ಸ್ಪರ್ಧಿಸಿ ಎನ್ನುತ್ತಿದ್ದಾರೆ. ಎಲ್ಲವೂ ಕುಮಾರಸ್ವಾಮಿಯವರ ಮೇಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ವಿಶ್ವಾಸ ಇದ್ದೇ ಇದೆ. ಆದರೂ, ಬಿಜೆಪಿ -ಜೆಡಿಎಸ್ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಷಯ ವಿಚಾರ ಇದಾಗಿದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular