HomeKarnatakaBIG NEWS: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

BIG NEWS: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ನಳೀನ್ ಕುಮಾರ್ ಕಟೀಲ್ ಪರ ವಕೀಲ ಕೆ.ಜಿ.ರಾಘವನ್ ಅವರ ವಾದ-ಪ್ರತಿವಾದ ಆಲಿಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular