ಬೆಂಗಳೂರು: ಐದು ವಿದ್ಯುತ್ ಸರಬರಾಜು ಕಂಪಿನಿಗಳ ಆದಾಯದಲ್ಲಿ ನಷ್ಟವುಂಟಾಗಿದ್ದು, ಅದನ್ನು ಸರಿದೂಗಿಸಲು ಮತ್ತೆ ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆದಿದೆ.
ಏಪ್ರಿಲ್ ನಿಂದ ವಿದ್ಯುತ್ ದರ ಏರಿಸುವ ಸಾಧ್ಯತೆ ಇದೆ. ಎಸ್ಕಾಂ 2024-25ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ವರದಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದೆ. ಎಸ್ಕಾಂ ಗಳ ಆದಾಯದಲ್ಲಿ ಸುಮಾರು 4,900 ಕೋಟಿ ರೂಪಾಯಿ ಖೋತಾ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಮಾರ್ಚ್ ನಲ್ಲಿ ವಿದ್ಯುತ್ ದರ ಪರೀಷ್ಕರಣೆ ಮಾಡಿದಾಗ ಕೆ ಇಆರ್ ಸಿ ಅಂದಾಜು ಮಾಡಿದ್ದ ಲೆಕ್ಕಾಚಾರದಲ್ಲಿ ವೆಚ್ಚ ಹೆಚ್ಚಾಗಿದೆ. ಆದಾಯದಲ್ಲಿ ಖೋತಾ ಆಗಿದೆ. ಇದರ ನಡುವೆ ಸಮತೋಲನ ಕಾಪಾಡಲು ದರ ಪರೀಷ್ಕರಣೆ ಮಾಡುವ ಅಗತ್ಯವಿದೆ ಎಂದು ಎಸ್ಕಾಂಗಳು ಕೆಇಆರ್ ಸಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

