HomeKarnatakaBREAKING NEWS: ಎಲೆಕ್ಟ್ರಿಕ್ ಬೈಕ್ ಅಂಗಡಿಗೆ ಬೆಂಕಿ; ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

BREAKING NEWS: ಎಲೆಕ್ಟ್ರಿಕ್ ಬೈಕ್ ಅಂಗಡಿಗೆ ಬೆಂಕಿ; ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ರಾಯಚೂರು: ಎಲೆಕ್ಟ್ರಿಕ್ ಬೈಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂತಸ್ಥಿನ ಕಟ್ಟಡ ಹೊತ್ತಿ ಉರಿದ ಘಟನೆ ರಾಯಚೂರಿನ ಮಹಾವೀರ್ ಚೌಕ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ. ಆರ್.ಕೆ.ಭಂಡಾರಿ ಎಂಬುವವರ ಎಲೆಕ್ಟ್ರಿಕ್ ಬೈಕ್ ಅಂಗಡಿಯಲ್ಲಿ ಬೆಂಕಿ ಸಂಭವಿಸಿದೆ. ಹಲವು ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಒಂದೇ ಕಟ್ಟಡದಲ್ಲಿ ಬಟ್ಟೆ ಅಂಗಡಿಯೂ ಇತ್ತು. ಬೆಂಕಿಯ ಕೆನ್ನಾಲಿಗೆ ಮೂರು ಅಂತಸ್ತಿನ ಕಟ್ಟಡವನ್ನು ವ್ಯಾಪಿಸಿದ್ದು, ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ.

ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular