ಎಲೆಕ್ಟ್ರಿಕ್ ಬೈಕ್ ಸ್ಪೋಟ; ಅಕ್ಕಪಕ್ಕದ ವಾಹನಗಳಿಗೂ ತಗುಲಿದ ಬೆಂಕಿ

ಈ ಹಿಂದೆ ಎಲೆಕ್ಟ್ರಿಕ್ ವಾಹನಗಳು ಸ್ಪೋಟಗೊಂಡ ಬಹಳಷ್ಟು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿತ್ತು. ಇದೀಗ ಬೇಸಿಗೆ ಸಂದರ್ಭದಲ್ಲಿ ಮತ್ತೊಂದು ಬೈಕ್ ಸ್ಪೋಟಗೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹತ್ತನೇ ತರಗತಿ ಪರೀಕ್ಷಾ ಕಾರ್ಯದಲ್ಲಿ ನಿಯೋಜನೆಗೊಂಡಿದ್ದ ಶಿಕ್ಷಕ ಪ್ರಕಾಶ್ ಎಂಬವರ ಬೈಕ್ ಸ್ಫೋಟಗೊಂಡಿದೆ.

ಪ್ರಕಾಶ್ ಕಿರುಗಾವಲು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆಗೆ ಕರ್ತವ್ಯದಲ್ಲಿದ್ದು, ಆವರಣದಲ್ಲಿದ್ದ ಮರದಡಿ ಬೈಕ್ ನಿಲ್ಲಿಸಿದ್ದರು. ಈ ವೇಳೆ ಬೈಕ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಪಕ್ಕದಲ್ಲಿದ್ದ ನಾಲ್ಕು ಬೈಕ್ ಗಳಿಗೂ ಸಹ ಬೆಂಕಿ ತಗುಲಿದೆ. ಬೈಕ್‌ ಸ್ಪೋಟಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read