ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ದುಬಾರಿ ಬೆಲೆಯ ಸ್ಮಾರ್ಟ್ ಮೀಟರ್ ಕಡ್ಡಾಯಕ್ಕೆ ಬ್ರೇಕ್

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ವ್ಯಾಪ್ತಿಯಲ್ಲಿ 8 ಜಿಲ್ಲೆಗಳ ಗ್ರಾಮೀಣ ಮತ್ತು ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಎಲ್‌ಟಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಗೆ ಒತ್ತಾಯ ಮಾಡದಂತೆ ಬೆಸ್ಕಾಂ ಸೂಚನೆ ನೀಡಿದೆ.

ಈ ಮೂಲಕ ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯಕ್ಕೆ ಬ್ರೇಕ್ ಬಿದ್ದಿದೆ. ಇದರಿಂದಾಗಿ ಶೇಕಡ 400 ರಿಂದ 800 ರಷ್ಟು ಅಧಿಕ ದರ ನೀಡಿ ಸ್ಮಾರ್ಟ್ ಮೀಟರ್ ಖರೀದಿಸುವ ಆತಂಕದಲ್ಲಿದ್ದ ಜನ ಪಾರಾಗಿದ್ದಾರೆ.

ಸ್ಮಾರ್ಟ್ ಮೀಟರ್ ತಂತ್ರಾಂಶದೊಂದಿಗೆ ಪುನಾರಚಿತ ವೇಗವರ್ಧಿತ ವಿದ್ಯುತ್ ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಕ್ರಮಕ್ಕೆ ಒಳಪಡದ ಪ್ರದೇಶದ ತಂತ್ರಾಂಶ ಸಂಯೋಜನೆಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಮತ್ತು ಸಣ್ಣ, ಪಟ್ಟಣ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಪಡೆಯಲು ಒತ್ತಾಯಿಸಬಾರದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read