ಬೆಂಗಳೂರು : ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಆರಂಭಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆ ಮುಖ್ಯಾಂಶಗಳು
• ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.
- ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸೂಚಿಸಲಾಯಿತು.
- ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು, ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಮೆಟ್ರೋ ಮಾದರಿಯ ವಾಹನ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.
- ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ.
- ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಲಾಗುವುದು .