HomeLatest NewsBREAKING : ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಆರಂಭ : CM...

BREAKING : ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಆರಂಭ : CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು ಹೀಗಿದೆ.!

ಬೆಂಗಳೂರು : ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಆರಂಭಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆ ಮುಖ್ಯಾಂಶಗಳು

• ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸೂಚಿಸಲಾಯಿತು.
  • ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು, ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಮೆಟ್ರೋ ಮಾದರಿಯ ವಾಹನ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.
  • ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ.
  • ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಲಾಗುವುದು .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular