HomeLatest NewsBREAKING : ಬೆಂಗಳೂರಲ್ಲಿ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕ ಚಿಕಿತ್ಸೆ...

BREAKING : ಬೆಂಗಳೂರಲ್ಲಿ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು !

ಬೆಂಗಳೂರು: ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಅನಂತ್ (10) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ.ಆರ್.ನಗರದ ಸ್ವತಂತ್ರನಗರದಲ್ಲಿ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ.

ಅನಂತ್ ಕುಟುಂಬ ನೇಪಾಳದಿಂದ ಬೆಂಗಳೂರಿಗೆ ಬಂದು ನೆಲೆಸಿತ್ತು. ಜೂನ್ 15ರಂದು ಪೊರಕೆ ಎಸೆಯಲು ಹೋದಾಗ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಅನಂತ್ ಗಾಯಗೊಂಡಿದ್ದ. ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 12:30 ರ ಸುಮಾರಿಗೆ ಬಾಲಕ ಕೊನೆಯುಸಿರೆಳೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular