HomeKarnatakaವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಲೈನ್ ಮ್ಯಾನ್ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಹುಲಿಕಟ್ಟಿ ಗ್ರಾಮದ ಪ್ರೇಮಾನಂದ(25) ಮೃತಪಟ್ಟವರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಹುಲಿಕಟ್ಟೆ ಗ್ರಾಮದ ನಿವಾಸಿ ಪ್ರೇಮಾನಂದ ಅವರನ್ನು ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಅಧಿಕಾರಿಗಳು ಕಂಬದ ಮೇಲೆ ಹತ್ತಿಸಿದ್ದರು ಎಂದು ಪ್ರೇಮಾನಂದ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಸ್ಪತ್ರೆ ಬಳಿ ಜಮಾವಣೆಗೊಂಡ ಲೈನ್ ಮ್ಯಾನ್ ಪ್ರೇಮಾನಂದ ಕುಟುಂಬದವರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular