HomeKarnatakaBREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ

BREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ

ಬೆಂಗಳೂರು: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ಓರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.

ಕೌಶಿಕ್ (27) ಮೃತ ಇಂಜಿನಿಯರ್. ಜಿಗಣಿ ಕೈಗಾರಿಕಾ ಪ್ರದೇಶದಲ್ಲಿನ ಖಾಸಗಿ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಪ್ಯಾನಲ್ ಬೋರ್ಡ್ ತಯಾರಿಸುವ ವೇಳೆ ಕೌಶಿಕ್ ಗೆ ಕರೆಂಟ್ ಶಾಕ್ ಹೊಡೆದಿದೆ. ಗಂಭೀರ ಸ್ಥಿತಿ ತಲುಪಿದ್ದ ಕೌಶಿಕ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೌಶಿಕ್ ಸಾವನ್ನಪ್ಪಿದ್ದಾರೆ. ಕಂಪನಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣದಿಂದಲೇ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಜಿಗಣಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular