ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆಯಲ್ಲಿ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ.

ಸತೀಶ್ ಶೆಟ್ಟಿ(44) ಮೃತಪಟ್ಟವರು ಎಂದು ಹೇಳಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಬುಧವಾರ ರಾತ್ರಿ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಗುರುವಾರ ಬೆಳಿಗ್ಗೆ ರೈತ ಸತೀಶ್ ಶೆಟ್ಟಿ ಗದ್ದೆಗೆ ಹೋಗಿದ್ದು, ಗದ್ದೆಯಲ್ಲಿ ಬಿದ್ದಿದ್ದ ತಂತಿ ಗಮನಿಸದೇ ತುಳಿದಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗದ್ದೆಗೆ ಹೋಗಿದ್ದ ಬಹು ಹೊತ್ತಿನವರೆಗೆ ಮನೆಗೆ ವಾಪಸ್ ಬಾರದ ಕಾರಣ ಮನೆಯವರು ಹುಡುಕಾಡಿದ್ದಾರೆ. ಗದ್ದೆ ಬಳಿ ಬಂದಾಗ ಸತೀಶ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವುದು ಕಂಡು ಬಂದಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read