
ನಲ್ಲೂರಿನ ಕಿರಣ್ (25) ಎಂಬ ಲೈನ್ ಮ್ಯಾನ್ ಮೃತಪಟ್ಟರೆ, ಮತ್ತೋರ್ವ ಲೈನ್ ಮ್ಯಾನ್ ಸುನೀಲ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿದ್ಯುತ್ ಕಾಮಗಾರಿ ಹಿನ್ನೆಲೆ ಕಿರಣ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಕೂಡಲೇ ಕಿರಣ್ ರನ್ನು ಶಿವಮೊಗ್ಗದ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅಷ್ಟರಲ್ಲೇ ಕಿರಣ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

