HomeKarnatakaSHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

SHOCKING: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು.

ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಚಾರ್ಜಿಂಗ್ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು. ಕರೆಂಟ್ ಶಾಕ್ ನಿಂದ ಶ್ರೀನಿವಾಸ ರೂಮ್ ನಲ್ಲಿ ಬಿದ್ದಿದ್ದ. ಆತನನ್ನು ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ವಿದ್ಯುತ್ ಪ್ರವಹಿಸಿದೆ, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಬಸವೇಶ್ವರನಗರ ಠಾಣೆ ಪೋಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಿಡಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆ ಕೈಗೊಂಡಿದ್ದಾರೆ.ಬಸವೇಶ್ವರ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular