HomeKarnatakaSHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಬಸಯ್ಯ ಹಿರೇಮಠ ಅವರ ಮನೆಯಲ್ಲಿ ಘಟನೆ ನಡೆದಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್ ಮಾಡುವಾಗ ಬ್ಯಾಟರಿ ಸ್ಪೋಟಗೊಂಡು ಬೈಕ್ ಸುಟ್ಟು ಕರಕಲಾಗಿದೆ. ಸ್ಕೂಟರ್ ಗೆ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಮನೆಗೆ ವ್ಯಾಪಿಸಿದೆ. ಇದರಿಂದಾಗಿ ಮನೆಯಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದು ಪಾರಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular