ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಆರ್‌ಟಿಓ ಕಚೇರಿ, ಹೈವೇಗಳಲ್ಲಿ ಚಾರ್ಜಿಂಗ್ ಕೇಂದ್ರ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಆರ್‌ಟಿಓ ಕಚೇರಿ, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮತ್ತು ನೋಂದಣಿ ಹೆಚ್ಚಳಕ್ಕೆ ರಾಜ್ಯದ ಆರ್.ಟಿ.ಓ. ಕಚೇರಿಗಳಲ್ಲಿ, ಹೈವೇಗಳಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ ಸೇರಿ ಮೂಲಸೌಕರ್ಯ ಒದಗಿಸಲಾಗುವುದು. ಸಾರಿಗೆ ಇಲಾಖೆ ವತಿಯಿಂದ ಸ್ಥಳೀಯ ಎಸ್ಕಾಂ ಗಳ ಸಹಯೋಗದಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ ಮಾಡಲಿದ್ದು, ಇದಕ್ಕಾಗಿ ಇಲಾಖೆಯಿಂದ ಅನುದಾನ ನೀಡಲಾಗುತ್ತದೆ.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಾಗುತ್ತಿದೆ. ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಎಲ್ಲಾ ಆರ್‌ಟಿಓ ಕಚೇರಿಗಳಲ್ಲಿ ಜಾಗ ನೀಡುವ ಬಗ್ಗೆ ಚರ್ಚೆ ನಡೆಸಿದ್ದು, ಅಗತ್ಯವಾದ ಅನುದಾನ ಕೂಡ ಒದಗಿಸಲಾಗುತ್ತದೆ ಈ ನಿಟ್ಟಿನಲ್ಲಿ ಬೆಸ್ಕಾಂ ಜತೆ ಚರ್ಚೆ ನಡೆಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡಲು ಮೋಟಾರ್ ವಾಹನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ. 25 ಲಕ್ಷ ರೂ.ಗೂ ಮೇಲ್ಪಟ್ಟ ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ ವಿಧಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read