HomeKarnatakaತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಿಕ್ಯಾತನಹಳ್ಳಿಯಲ್ಲಿ ನಡೆದಿದೆ.

15 ವರ್ಷದ ಹೆಣ್ಣಾನೆ ವಿದ್ಯುತ್ ತಂತಿಗೆ ಬಲಿಯಾಗಿದೆ. ಆನೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕರಿಗಳಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಮಳವಳ್ಳಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆಯೇ ಆನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular