HomeKarnatakaBIG NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ

BIG NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.

ಉಡುಪಿ ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಮೇಲೆ ಗೊತ್ತಾಗದೇ ಕಾಲಿಟ್ಟ ವ್ಯಕ್ತಿ ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದಾರೆ.

ಇರ್ಷಾದ್ (56) ಮೃತ ದುರ್ದೈವಿ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular